news

Issue of Guidelines by Examination Board regarding sSLC Annual Examination Registration

SSLC ವಾರ್ಷಿಕ ಪರೀಕ್ಷೆ ನೋಂದಣಿ ಕುರಿತು ಪರೀಕ್ಷಾ ಮಂಡಳಿಯಿಂದ ಮಾರ್ಗಸೂಚಿ ಬಿಡುಗಡೆ

2023 ಮಾರ್ಚ್ / ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022-23 ನೇ ಸಾಲಿನ ಎಸ್ಎಸ್‌ಎಲ್‌ಸಿ ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅರ್ಜಿಗಳ ಸ್ವರೂಪ, ಪರೀಕ್ಷಾ ಶುಲ್ಕ ನಿಗಧಿ, ಪರೀಕ್ಷಾ ಶುಲ್ಕ ವಿನಾಯಿತಿ, ಪರೀಕ್ಷಾ ಶುಲ್ಕವನ್ನು ಪಾವತಿಸುವ ಸ್ವರೂಪ, ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್‌ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ ಪಾವತಿಸುವ ಕುರಿತು ಸೇರಿದಂತೆ ಇನ್ನೂ ಅನೇಕ ಮಾರ್ಗಸೂಚಿಗಳ ಟಿಪ್ಪಣಿಯನ್ನು ಬಿಡುಗಡೆ ಮಾಡಿದೆ

2023 ಮಾರ್ಚ್ / ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ

ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2023ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF), ಖಾಸಗಿ ಅಭ್ಯರ್ಥಿಗಳ (CCEPF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ ( CCRPR, CCEPR, NSR,NSPR) ವಿವರಗಳನ್ನು ಮಂಡಳಿಯ https://sslc.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್‌ಲೋಡ್‌ ಮಾಡಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಶಾಲೆಯ ಮುಖ್ಯೋಪಾಧ್ಯಯರು ಈ ಮಾರ್ಗಸೂಚಿಯನ್ವಯ ವಿದ್ಯಾರ್ಥಿಗಳ ನೋಂದಣಿ ಮಾಡಲು ತಿಳಿಸಿದೆ.

ಪರೀಕ್ಷಾ ಮಂಡಳಿ ನಿಗದಿಪಡಿಸಿದ ಶುಲ್ಕ ವಿವರ
ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಶಾಲಾ ಅಭ್ಯರ್ಥಿಗಳಿಗೆ (CCERF)ನಿಗದಿಪಡಸಿದ ಶುಲ್ಕ.
ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಶಾಲಾ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ- ಪರೀಕ್ಷಾ ಶುಲ್ಕ ರೂ. 585 ಮತ್ತು ಲ್ಯಾಮಿನೇಷನ್ ಶುಲ್ಕ ರೂ.22 ಸೇರಿ ಒಟ್ಟು ರೂ.607.
ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಖಾಸಗಿ ಅಭ್ಯರ್ಥಿಗಳಿಗೆ (CCEPF).
ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ – ಪ್ರತಿ ವಿದ್ಯಾರ್ಥಿಗೆ- ರೂ.205.
ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಖಾಸಗಿ ಅಭ್ಯರ್ಥಿಗಳ (CCEPF) ಪರೀಕ್ಷಾ ಶುಲ್ಕ- ಪರೀಕ್ಷಾ ಶುಲ್ಕ ರೂ. 585 ಮತ್ತು ಲ್ಯಾಮಿನೇಷನ್ ಶುಲ್ಕ ರೂ.22 ಸೇರಿ ಒಟ್ಟು ರೂ.607.
ಎಲ್ಲ ವಿಧದ ಪುನರಾವರ್ತಿತ ಅಭ್ಯರ್ಥಿಗಳು ( CCRPR, CCEPR, NSR,NSPR)
ಎಲ್ಲ ವಿಧದ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ-

  • ಒಂದು ವಿಷಯಕ್ಕೆ- 370 ರೂಪಾಯಿ.
  • ಎರಡು ವಿಷಯಕ್ಕೆ – 461 ರೂಪಾಯಿ.
  • ಮೂರು ಹಾಗೂ ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ – 620 ರೂಪಾಯಿ.

Related Articles

Leave a Reply

Your email address will not be published. Required fields are marked *

Back to top button