news

KCET 2022: High Court important order on CET ranking

KCET 2022: ಸಿಇಟಿ ರ‍್ಯಾಂಕಿಂಗ್‌ ಕುರಿತು ಹೈಕೋರ್ಟ್‌ ಮಹತ್ವದ ಆದೇಶ

ಕಳೆದ ಜುಲೈ 30ರಂದು ಹೊರಡಿಸಲಾಗಿದ್ದ 2021-2022ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್‌, ಕೋರ್ಸ್‌ಗಳ ಪ್ರವೇಶಾತಿಗೆ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇಕಡ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇಕಡ. 50 ಅಂಕ ಪರಿಗಣಿಸಿ ಹೊಸದಾಗಿ ರ‍್ಯಾಂಕ್‌ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.

ಹೈಲೈಟ್ಸ್‌:

  • ಸಿಇಟಿ ರ‍್ಯಾಂಕಿಂಗ್‌ ಕುರಿತು ಹೈಕೋರ್ಟ್‌ ಮಹತ್ವದ ಆದೇಶ.
  • ಪುನಾರವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲು ಆದೇಶ.
  • ಕೆಇಎ ನಿರ್ಧಾರ ತಿರಸ್ಕೃತ.
ಸಿಇಟಿ ರ್ಯಾಂಕಿಂಗ್ ಕುರಿತು ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಂಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮರು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಂಕಿಂಗ್ ಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್‌ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ತಿಳಿಸಿದೆ.
ಕಳೆದ ಜುಲೈ 30ರಂದು ಹೊರಡಿಸಲಾಗಿದ್ದ 2021-2022ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್‌, ಕೋರ್ಸ್‌ಗಳ ಪ್ರವೇಶಾತಿಗೆ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇಕಡ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇಕಡ. 50 ಅಂಕ ಪರಿಗಣಿಸಿ ಹೊಸದಾಗಿ ರ‍್ಯಾಂಕ್‌ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.
ನ್ಯಾಯಾಲಯದ ಈ ತೀರ್ಪಿನಿಂದ 2020-21ರ ಸಾಲಿನ ಸುಮಾರು 21 ಸಾವಿರ ಮರು ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಅದೇ ರೀತಿ 2021-2022ರ ಸಾಲಿನ ಸಿಇಟಿ ರ‍್ಯಾಂಕಿಂಗ್‌ನಲ್ಲಿ ಭಾರಿ ಏರುಪೇರಾಗುವ ಸಾಧ್ಯತೆಯಿದೆ.

Related Articles

Leave a Reply

Your email address will not be published. Required fields are marked *

Back to top button